ಬೆಂಗಳೂರು: ನಗರ್ತಪೇಟೆಯ ಜ್ಯೂವೆಲ್ಲರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಸಾವನ್ನಪ್ಪಿರುವ ಘಟನೆ ಹಲಸೂರುಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ಮೂಲದ ವಿಷ್ಣು ಸಾವಂತ್ ಸಾವಿಗೀಡಾದ. ವ್ಯಕ್ತಿ. ಈಕೆ ಪತ್ನಿ ವೈಜಯಂತಿ ಎಂಬುವರಿಗೆ ಸುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಮಧ್ಯಾಹ್ನ ಅವಘಡ ಸಂಭವಿಸಿದೆ.ಅಂಬಿಕಾ ರಿಫೈನರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ನರೇಂದ್ರ ಸೋನಿ ಎಂಬುವರು ನೀಡಿದ ದೂರಿನ ಮೇರೆಗೆ ಶಾಪ್ ಮಾಲೀಕರಾದ ರಮೇಶ್ ಕೊಠಾರಿ, ಮಹೇಶ್ ಕೊಠಾರಿ, ಕಟ್ಟಡ ಮಾಲೀಕರು ಸೇರಿ ಒಟ್ಟು ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಳೆದೊಂದು ಒಂದು ವರ್ಷಗಳಿಂದ ನಗರ್ತಪೇಟೆಯ ಅಂಬಿಕಾ ರೀಫೈನರಿ ಶಾಪ್ ನಲ್ಲಿ ದಂಪತಿ ಚಿನ್ನಾಭರಣ ಕರಗಿಸುವ ಕೆಲಸ ಮಾಡಿಕೊಂಡು ಬಾಡಿಗೆವೊಂದರಲ್ಲಿ ವಾಸವಾಗಿದ್ದರು. ನಿನ್ನೆ ಮಧ್ಯಾಹ್ನ ಹೆಂಡತಿಯು ಊಟದ ಬಾಕ್ಸ್ ತೆಗೆದುಕೊಂಡು ಬಂದಾಗ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿದೆ. ಪಕ್ಕದಲ್ಲೇ ಇದ್ದ ದಂಪತಿಗೆ ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ವಿಷ್ಣು ಸಾವನ್ನಪ್ಪಿದರೆ ಪತ್ನಿಗೆ ಸುಟ್ಟ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವುದಾಗಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ತಿಳಿಸಿದ್ದಾರೆ.
ಚಿನ್ನ ಕರಗಿಸಲು ಎಲ್ ಪಿಜಿ ಸಿಲಿಂಡರ್ ಜೊತೆ ಆಕ್ಸಿಜನ್ ಸಿಲಿಂಡರ್ ಬಳಸುತ್ತಾರೆ. ನಿನ್ನೆಯು ಸಹ ಆಕ್ಸಿಜನ್ ಸಿಲಿಂಡರ್ ಬಳಸಿ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಆಕ್ಸಿಜನ್ ಸಿಲಿಂಡರ್ ಬಳಸಲು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.