ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಜಟಾಪಟಿ ನಡೆಯುತ್ತಿದ್ದು, ಈ ನಡುವೆ ಮಂಡ್ಯದಲ್ಲಿ ಬಿ.ವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ವಿನೂತನ ಪ್ರತಿಭಟನೆ ಕೈಗೊಳ್ಳಲಾಗಿದೆ.
ಮಂಡ್ಯ ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ಪತ್ರ ಬರೆದಿದ್ದಾರೆ. ಮಂಡ್ಯದ ಪೋಸ್ಟ್ ಆಫೀಸ್ ಬಳಿ ಈ ಪ್ರತಿಭಟನೆ ನಡೆದಿದ್ದು, ಅಂಚೆ ಕಚೇರಿ ಮೂಲಕ ನಡ್ಡಾಗೆ ಪತ್ರ ಪೋಸ್ಟ್ ಮಾಡಲಾಗಿದೆ. ಈ ಪತ್ರಕ್ಕೆ ರಕ್ತದ ಹೆಬ್ಬೆಟ್ಟು ಮುದ್ರೆ ಒತ್ತಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಆಗ್ರಹಿಸಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ.ವಿಜಯೇಂದ್ರರನ್ನ ನೇಮಕ ಮಾಡಿ. ಯಡಿಯೂರಪ್ಪ (B. S Yediyurappa) ಒಂದು ಸೀಟನ್ನ 114 ಸೀಟ್ ಮಾಡಿ ಪಕ್ಷವನ್ನ ಅಧಿಕಾರಕ್ಕೆ ತಂದ್ರು. ಆದರೆ ಈಗ ರಾಜ್ಯದ ನಾಯಕರ ಬೇಜವ್ದಾರಿತನದಿಂದ ಬಿಜೆಪಿ ಸೋತಿದೆ.