ಬೆಂಗಳೂರು: ಬಿಜೆಪಿ ಇನ್ನೂ ವಿಪಕ್ಷ ನಾಯಕರನ್ನು ನೇಮಕ ಮಾಡದ ಹಿನ್ನೆಲೆ ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಬಿಜೆಪಿ ನಾಯಕರ ಕಾಲೆಳೆದಿದೆ. ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ಬೇಕಾಗಿದ್ದಾರೆ. ಆರ್ಎಸ್ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು, ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನ ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕರ ಕಾಲೆಳೆದಿದೆ.
ಕಾಂಗ್ರೆಸ್ ಟ್ವೀಟ್ನಲ್ಲಿ ಏನಿದೆ?
ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ…
* ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
* ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
* ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!
ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ರಾಜ್ಯ ಬಿಜೆಪಿ ಆಡಳಿತ ಮಾಡಲು ನಾಲಾಯಕ್ ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ. ಈಗ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್ ಎಂದು ತಿಳಿಯುತ್ತಿದೆ. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನ ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ ಎಂದು ವ್ಯಂಗ್ಯ ಮಾಡಿದೆ