ನವದೆಹಲಿ: ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತ ತೀವ್ರ ದುಃಖ ತಂದಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲಿ. ಗಾಯಾಳುಗಳಿಗೆ ಸ್ಥಳೀಯ ಆಡಳಿತ ಮಂಡಳಿ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ.
ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ತಿಳಿಸಿದ್ದಾರೆ.