ಬೆಂಗಳೂರು: ಮೊದಲು ಬಿಜೆಪಿ ನಾಯಕ ಸಿಟಿ ರವಿ ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ. ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪಂಚೆ ಬಗ್ಗೆ ಮಾತನಾಡಿದ್ದ ಸಿಟಿ ರವಿಗೆ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ.
ಬಿಜೆಪಿ 65 ಸ್ಥಾನಕ್ಕೆ ಕುಸಿದಿರುವ ಅವರಲ್ಲಿ ಕಚ್ಚಾಟ ಇಲ್ವಾ. ನಮ್ಮಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಏನು ಕಿತ್ತಾಡುತ್ತಿದ್ದಾರಾ? ಸುಮ್ಮನೇ ಅವರೇ ಕಲ್ಪಿಸಿಕೊಂಡು ಮಾತಾನಾಡುತ್ತಾರೆ. ಮನಸ್ಸಿಗೆ ಬಂದಂತೆ ಮಾತನಾಡಿದವರನ್ನು ಜನರು ಮಲಗಿಸಿದ್ದಾರೆ. ಅದರಲ್ಲಿ ಒಬ್ಬರು ಇಬ್ಬರು ಉಳಿದುಕೊಂಡಿದ್ದಾರೆ. ಜನ ಈಗಾಗಲೇ ಉತ್ತರ ಕೊಟ್ಟಿದ್ದಾರೆ. ನಮ್ಮ ಪಂಚೆ ಸರಿ ಮಾಡೋದು ಬೇಡ. ಮೊದಲು ಅವರ ಪಂಚೆ ಸರಿ ಮಾಡಿಕೊಳ್ಳೋಕೆ ಹೇಳಿ ಎಂದು ಕಿಡಿಕಾರಿದರು.