ಬೆಂಗಳೂರು: ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಡೆಡ್ಲೈನ್ ಇಲ್ಲ. ಗೃಹಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತೆ. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್. ಗೃಹಜ್ಯೋತಿಗೆ ಅರ್ಜಿ ಹಾಕದಿದ್ರೆ ಮುಂದಿನ ತಿಂಗಳು ಬಿಲ್ ಬರುತ್ತೆ.
‘ಗೃಹಜ್ಯೋತಿ’ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಆದಷ್ಟು ಬೇಗ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ರೆ ಒಳ್ಳೇದು ಎಂದರು.