ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್. ಪುರಂ ಕುಬೇರ ತಹಸೀಲ್ದಾರ್ ಅಜಿತ್ ರೈ ಅವರನ್ನು ಅಮಾನತುಗೊಳಿಸಲಾಗಿದೆ.
ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ಅಜಿತ್ ರೈ ಆ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಸಹ ಪಡೆದಿದ್ದನು.. ಕೆ.ಆರ್. ಪುರಂನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದು ಆದಾಯಕ್ಕಿಂತ ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.