ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ.
ಕರಾವಳಿ ಪ್ರದೇಶದಲ್ಲಿ ಮುಂದಿನ 2 ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ. ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಉಡುಪಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಠ 34 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.