ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಇನ್ನೊಂದೇ ವಾರ ಬಾಕಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಅಂತಿಮ ಹಂತದ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ವಸಂತನಗರದ KSFC ಕಚೇರಿಯಲ್ಲಿ ಸಭೆ ನಡೆಸುತ್ತಿರುವ ಸಿಎಂ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.
ಗೃಹಜ್ಯೋತಿ ಯೋಜನೆಯಲ್ಲಿ ಬಹಳಷ್ಟು ಗೊಂದಲಗಳಿವೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಹಳಷ್ಟು ಗೊಂದಲ ಮಾಡಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಸಂಪುಟ ಸಭೆಯಲ್ಲಿ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಒಂದೂವರೆ ತಿಂಗಳಲ್ಲಿ ಕೆಲ ನಿರ್ಣಯ ತೆಗೆದುಕೊಂಡಿದ್ದಾರೆ. ಸರ್ಕಾರದ ನಿರ್ಧಾರ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡ್ತೇವೆ ಎಂದರು.