ಬೆಂಗಳೂರು: ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಿರಿಸಿದ್ದೇವೆ. ನಾಡಿದ್ದು ಸಾವಿರಾರು ಕಾರ್ಯಕರ್ತರ ಜತೆ ಪ್ರತಿಭಟನೆ ನಡೆಸುತ್ತೇವೆ. ಗ್ಯಾರಂಟಿ ಅನುಷ್ಠಾನದ ಬಗ್ಗೆ ಬಿಜೆಪಿಯಿಂದ ಪ್ರತಿಭಟನೆ ನಡೆಸುತ್ತೇವೆ. ಪ್ರತಿಭಟನೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ದೆಹಲಿಗೆ ಬರಲು ಹೇಳಿದ್ದಾರೆ. ವಿಷಯ ಏನು ಅಂತ ಗೊತ್ತಿಲ್ಲ. ಹೋಗಿ ಮಾತಾಡಿ ಸಾಧ್ಯ ಆದರೆ ಇಂದೇ ಬರುತ್ತೇನೆ. ನಾಡಿದ್ದು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಹೀಗಾಗಿ ಅದರಲ್ಲಿ ಭಾಗವಹಿಸಬೇಕು ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.