ಬೆಂಗಳೂರು: ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ ಎಂಬ ಶೀರ್ಷಿಕೆ ಅಡಿಯಲ್ಲಿ ನಾವು ಹೋರಾಟ ಮಾಡುತ್ತೇವೆ. ಗ್ಯಾರಂಟಿ ಆಧಾರದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಹೇಳಿದ್ದರು. ಈಗ ಕಾಂಗ್ರೆಸ್ ಸರ್ಕಾರ ಕೊಟ್ಟು ಮಾತು ತಪ್ಪಿದೆ.
ಹೀಗಾಗಿ ಬಿಜೆಪಿ ಸದನದ ಹೊರಗಡೆ ಮತ್ತು ಒಳಗಡೆ ಹೊರಟ ಮಾಡಲಿದೆ. ಸದನದ ಹೊರಗಡೆ ಮಾಜಿ ಸಿಎಂ ಯಡಿಯೂರಪ್ಪ ಅವರು ಹೋರಾಟ ಮಾಡಲಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ಫ್ರೀಡಂ ಪಾರ್ಕ್ನಲ್ಲಿ ಜುಲೈ 4 ರಂದು ಪ್ರತಿಭಟನೆ ಮಾಡಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಹೇಳಿದ್ದಾರೆ.