ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನೇ ತಮ್ಮನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಹುಬ್ಬಳ್ಳಿಯ ಮಧುರಾ ಕಾಲೋನಿಯಲ್ಲಿ ನಡೆದಿದೆ. ಅಜಯ ಎಂಬುವನೇ ಗಾಯಗೊಂಡಿದ್ದು, ಅಣ್ಣ ತಮ್ಮಂದಿರ ಆಸ್ತಿ ವಿಚಾರ ಚಾಕು ಇರಿತದ ವರೆಗೆ ಬಂದಿರುವುದು ವಿಪರ್ಯಾಸಕರ ಸಂಗತಿಯಾಗಿದೆ.
ಇನ್ನೂ ಗಾಯಗೊಂಡ ಅಜಯ್ ಎಂಬಾತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಚಾಕುವಿನಿಂದ ಕೈಗೆ ಹಾಗೂ ಹೊಟ್ಟೆಯ ಭಾಗಕ್ಕೆ ಇರಿದಿದ್ದು, ಗಂಭೀರವಾಗಿ ಗಾಯಗಳಾಗಿವೆ. ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.