ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ ರೈತರಿಗೆ ಮಾರಕವಾಗಿರುವ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ರಾಜ್ಯ ರೈತ ಸಂಘ ಕೋಡಿಹಳ್ಳಿ ಬಣದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಜಾರಿಗೆ ತಂದ ನಂತರ ಕಾಂಗ್ರೆಸ್ನವರು ನಮ್ಮ ಜೊತೆ ಒಡನಾಟ ಇಟ್ಟುಕೊಂಡು ಬಿಜೆಪಿ ಸರ್ಕಾರ ತಪ್ಪು ಮಾಡಿದೆ.
ಸರ್ಕಾರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ರದ್ದು ಮಾಡುತ್ತೇವೆ ಎಂದು ಹೇಳಿದ್ದರು. ಹೀಗಾಗಿ ಈ ಅಧಿವೇಶದಲ್ಲಿ ಕಾಂಗ್ರೆಸ್ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದು ಮಾಡಬಹುದು ಎಂಬ ಆಶಾವಾದ ಇಟ್ಟುಕೊಂಡಿದ್ದೇವೆ. ಆದರೆ, ಸಿದ್ದರಾಮಯ್ಯ ಅವರು ಕೃಷಿ ಕಾಯ್ದೆಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಇದು ಆತಂಕ ಮೂಡಿಸಿದೆ ಎಂದರು.