ಬೆಂಗಳೂರು ;- ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡು ಬೆತ್ತಲಾಗಿದ್ದಾರೆ ಮಾಜಿ ಸಂಸದ ವಿ ಎಸ್ ಉಗ್ರಪ್ಪ ಕಿಡಿಕಾರಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕರಾಗಲು, ಮಂತ್ರಿಯಾಗಲು ಏನೆಲ್ಲ ಮಾಡಿದ್ದರು. ಹೇಗೆ ಮ್ಯಾಚ್ ಫಿಕ್ಸಿಂಗ್ ಮಾಡಿದ್ದರು ಎಂಬುದರ ಬಗ್ಗೆ ಬಿಜೆಪಿ ಅವರೇ ಮಾತನಾಡುತ್ತಿದ್ದಾರೆ. ಆಡಳಿತ ಪಕ್ಷದಲ್ಲಿದ್ದಾಗ ರಾಜ್ಯವನ್ನು ಸರಿಯಾದ ದಿಕ್ಕಿನಲ್ಲಿ ತೆಗೆದುಕೊಂಡು ಹೋಗುವ ಪ್ರವೃತ್ತಿಯನ್ನು ಅವರು ತೋರಲಿಲ್ಲ. ಈಗ ವಿರೋಧ ಪಕ್ಷದ ಸ್ಥಾನದಲ್ಲಿ ಇದ್ದುಕೊಂಡು ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ. ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರ ಜಾರಿಗೆ ತಂದ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಸಿದ್ದರಾಮಯ್ಯ ಅವರ ಸರ್ಕಾರವು ಅನ್ನ ಭಾಗ್ಯ ಯೋಜನೆ ಜಾರಿ ಮಾಡಿ ಬಡವರಿಗೆ ಉಚಿತ ಅಕ್ಕಿ ನೀಡುವ ಕೆಲಸ ಮಾಡುತ್ತಿದೆ ಎಂದು ಉಗ್ರಪ್ಪ ಹೇಳಿದರು.
ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡು ಬೆತ್ತಲಾಗಿದ್ದಾರೆ. ಅವರ ನಿಜವಾದ ಬಣ್ಣ ಬಯಲಾಗುತ್ತಿದೆ.
ಬಡವರ ಹಸಿವನ್ನು ಅರಿತ ಕಾಂಗ್ರೆಸ್ ಸರ್ಕಾರ ಈ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 7 ಕೆಜಿ ಅಕ್ಕಿಯನ್ನು ನೀಡಿತ್ತು. ನಂತರ ಬಂದ ಬಿಜೆಪಿ ಸರ್ಕಾರ 5 ಕೆಜಿಗೆ ಇಳಿಸಿತ್ತು. ಜನರ ಸಂಕಷ್ಟ ಹರಿತ ಕಾಂಗ್ರೆಸ್ ಈ ಬಡವರಿಗೆ ತಲ 10 ಕೆಜಿ ಅಕ್ಕಿ ನೀಡುವ ಗ್ಯಾರಂಟಿ ಯೋಜನೆಯನ್ನು ಘೋಷಣೆ ಮಾಡಿತು. ಅಧಿಕಾರಕ್ಕೆ ಬಂದ ದಿನವೇ ತನ್ನ ಯೋಜನೆಗಳಿಗೆ ಚಾಲನೆ ನೀಡಿರುವಂತಹ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ನಮ್ಮ ಯೋಜನೆಗಳ ಬಗ್ಗೆ ಟೀಕೆ ಮಾಡುವ ಬಿಜೆಪಿ ನಾಯಕರು ತಾವು 2018ರ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆಗಳ ಪೈಕಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ? ಎಂದು ಉಗ್ರಪ್ಪ ಪ್ರಶ್ನಿಸಿದರು.