ಮಣಿಪುರದ ಜನಾಂಗೀಯ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕಿಡಿಕಾರಿದ್ದಾರೆ.
ದೇಶದಲ್ಲಿ ಎಲ್ಲೇ ಅಶಾಂತಿ ಮೂಡಿದಾಗಲೂ ಒಬ್ಬ ಪ್ರಧಾನಿ ಮಾಡಬಹುದಾದ ಮೂಲಭೂತ, ಅತಿ ಸರಳ, ಕಾಮನ್ ಸೆನ್ಸ್ನ ಕೆಲಸ ಶಾಂತಿಯ ಕರೆ ಕೊಡುವುದು. ಅದನ್ನೂ ಕೂಡ ಮಾಡದ ಪ್ರಧಾನಿಯ ಮನಸ್ಥಿತಿಯೇನು? ನೂರ ನಲವತ್ತು ಕೋಟಿ ಓಟಿನ ದೇಶದಲ್ಲಿ ಕೇವಲ 2 ಲೋಕಸಭೆ ಸೀಟಿನ ಮಣಿಪುರದ ಸತ್ತುಹೋದ ನೂರು ಓಟು, ಮನೆ ಕಳೆದುಕೊಂಡ 50 ಸಾವಿರ ಓಟುಗಳು, ಈ ಪ್ರಚಾರದಾಹಿ ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? 2002ರಲ್ಲಿ ಗುಜರಾತ್ 2023 ರಲ್ಲಿ ಮಣಿಪುರ, ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ. ಇತಿಹಾಸಕ್ಕೆ ಮರೆವಿಲ್ಲ, ನೆನಪಿರಲಿ” ಎಂದು ಎಂದಿದ್ದಾರೆ.
ಮಣಿಪುರದ ಸಿಎಂ ಬಿರೇನ್ ಸಿಂಗ್ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗುತ್ತಿದೆ. ಅಲ್ಲದೇ, ಬಿರೇನ್ ಸಿಂಗ್ ಸ್ವತಃ ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಗಳಿಂದ ಬೇಸತ್ತು ರಾಜೀನಾಮೆ ನೀಡಲು ಮುಂದಾಗಿದ್ದರು. ಬಳಿಕ ಆ ನಿರ್ಧಾರವನ್ನು ಅವರು ಹಿಂಪಡೆದಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಮಣಿಪುರಕ್ಕೆ ಆಗಮಿಸಿ, ಪರಿಹಾರ ಶಿಬಿರಗಳಲ್ಲಿ ಜಾತಿ ಹಿಂಸಾಚಾರದಿಂದ ಸ್ಥಳಾಂತರಗೊಂಡ ಜನರೊಂದಿಗೆ ಸಂವಾದ ನಡೆಸಿದ್ದಾರೆ. ಆದರೆ ಈ ಬಗ್ಗೆ ಪ್ರಧಾನಿ ಮೋದಿ ಮೌನವಾಹಿಸಿದ್ದಾರೆ ಎಂಬುದು ನಟ ಕಿಶೋರ್ ಆರೋಪ.