ಬೆಂಗಳೂರು: ಇಂದಿನಿಂದ 10 ದಿನ ವಿಧಾನಮಂಡಲ ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.
2 ಕಿ.ಮೀ. ವ್ಯಾಪ್ತಿಯಲ್ಲಿ ಪ್ರತಿಭಟನೆ, ಱಲಿ, ಧರಣಿ ನಡೆಸುವಂತಿಲ್ಲ. ವಿಧಾನಸೌಧದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಮೂವರು ಡಿಸಿಪಿ, 15 ಎಸಿಪಿ, 80 ಇನ್ಸ್ಪೆಕ್ಟರ್ಗಳು ಸೇರಿದಂತೆ ವಿಧಾನಸೌಧ ಸುತ್ತಮುತ್ತ 1500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.