ಬೆಂಗಳೂರು: ಗ್ಯಾರಂಟಿ ವಿಚಾರದಲ್ಲಿ ಕಾಂಗ್ರೆಸ್ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಕಾಂಗ್ರೆಸ್ ನಾಯಕರು ವರ್ಗಾವಣೆ ದಂಧೆ ಶುರು ಮಾಡಿದ್ದಾರೆ. ನಾಯಕರ ಆಧಾರಿತ ಸರ್ಕಾರವಿದು ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಜನರಿಗೆ ಗ್ಯಾರಂಟಿಗಳನ್ನು ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಜಾರಿಗೊಳಿಸುತ್ತೇವೆ. ಎಂದಿದ್ದರು. ಈಗ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ತಪ್ಪಿದೆ. ಸದನದ ಹೊರಗಡೆ ಮತ್ತು ಒಳಗಡೆ ಹೋರಾಟ ಮಾಡಲಿದ್ದೇವೆ. ಸದನದ ಹೊರಗಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಜು.4ರಂದು ಫ್ರೀಡಂಪಾರ್ಕ್ನಲ್ಲಿ ಹೋರಾಟ ಮಾಡುತ್ತಾರೆ ಎಂದು ಹೇಳಿದರು.
ಷರತ್ತು ಇಲ್ಲದೇ ಗ್ಯಾರಂಟಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಈಗ ನೋಡಿದ್ರೆ ಗ್ಯಾರಂಟಿಗಳಿಗೆ ಸರ್ಕಾರ ಕಂಡಿಷನ್ ಹಾಕುತ್ತಿದೆ. 10 ಕೆಜಿ ಅಕ್ಕಿಯನ್ನು ಕಾಂಗ್ರೆಸ್ ಸರ್ಕಾರ ಕೊಡಬೇಕು. ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿ ಕೊಡಬೇಕು. 200 ಯುನಿಟ್ ವಿದ್ಯುತ್ ಫ್ರೀ ಕೊಡುತ್ತೇವೆ ಎಂದು ಹೇಳಿದ್ದರು. ಆದ್ರೆ 200 ಯುನೈಟೆಡ್ ವಿದ್ಯುತ್ ಫ್ರೀ ಕೊಡುತ್ತಿಲ್ಲ. ಜನರು ವಿದ್ಯುತ್ ವಲೆಯನ್ನು ಖರೀದಿ ಮಾಡಿದ್ದಾರೆ. ಗೃಹ ಜ್ಯೋತಿ ಯೋಜನೆಯಿಂದ ಜಗಳಗಳು ಶುರುವಾಗಿದೆ ಎಂದು ಕಿಡಿಕಾರಿದರು.