ಚಾಮರಾಜನಗರದಲ್ಲಿ ಆಷಾಡಮಾಸದಲ್ಲಿ ನಡೆಯುವಂತಹ ಇತಿಹಾಸ ಪ್ರಸಿದ್ದ ಶ್ರೀ ಚಾಮರಾಜೇಶ್ವರ ಬ್ರಹ್ಮ ರಥೋತ್ಸವವು ಕೆಂಪನಂಜಾಂಬಸಮೇತಚಾಮರಾಜೇಶ್ವರಸ್ವಾಮಿ ಜಾತ್ರಾ ರಥೋತ್ಸವನ್ನು ವಿಜೃಂಭಣೆಯಿಂದ ನಡೆಸಲಾಯಿತು.
ಮಧ್ಯಾಹ್ನ 12.30 ಗಂಟೆಯ ಶುಭ ಲಗ್ನದಲ್ಲಿ ರಥೋತ್ಸವ ನೆರವೇರಿತು.
ರಥವು ದೇವಸ್ಥಾನದ ಮುಂಭಾಗದಿಂದ ದಕ್ಷಿಣಾಭಿಮುಖವಾಗಿ ಚಲಿಸಿ, ಎಸ್.ಬಿ.ಎಂ. ರಸ್ತೆಯಲ್ಲಿ ಸಾಗಿ ವೀರಭದ್ರೇಶ್ವರಸ್ವಾಮಿ ದೇವಾಲಯದ ವೃತ್ತದಿಂದ ಮಾರಮ್ಮ ದೇವಸ್ಥಾನದ ರಸ್ತೆಯ ಮೂಲಕ ಹಳೆ ತರಕಾರಿ ಮಾರುಕಟ್ಟೆ ರಸ್ತೆಯಲ್ಲಿ ಹಾದು ದೇವಸ್ಥಾನದ ಮೂಲಸ್ಥಾನ ತಲುಪಿತು.