ಹುಬ್ಬಳ್ಳಿ: ಹಾವಿನೊಂದಿಗೆ ಹುಚ್ಚಾಟ ಆಡಲು ಹೋಗಿ ವ್ಯಕ್ತಿಯೊಬ್ಬ ನಾಗರಹಾವು ಕಚ್ಚಿಸಿಕೊಂಡು ಸಾವು ಬದುಕಿನೊಂದಿಗೆ ಹೋರಾಟ ನಡೆಸುತ್ತಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದ್ದು ಗಾಯಾಳು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ.
ಸಿದ್ದಪ್ಪ ಎಂಬ ವ್ಯಕ್ತಿ ನಾಗರಹಾವಿನೊಂದಿಗೆ ಹುಚ್ಚಾಟ ಆಡುತ್ತಿದ್ದು, ನಾಗರಹಾವಿನ ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು
ನಾಗರಹಾವು ಕಚ್ಚಿದ್ದ ತಕ್ಷಣ ನರಗುಂದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಆದರೇ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗದಗ ಜಿಲ್ಲೆ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.