ಬೆಂಗಳೂರು ;- ಕಾಂಗ್ರೆಸ್ ಸರ್ಕಾರದ ಮೇಲೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ವೈಎಸ್ಟಿ ಮತ್ತು ವಿಎಸ್ಟಿ ಟ್ಯಾಕ್ಸ್ ಬಗ್ಗೆ ಸಾಕ್ಷಿಗಳು ಇದ್ದರೆ ಕೊಡಿ. ಅದರ ಬಗ್ಗೆ ನಾವು ತನಿಖೆ ಮಾಡುತ್ತೇವೆ. ವೈಎಸ್ಟಿ ಅಂದ್ರೆ ಏನು ಅನ್ನೋದರ ಬಗ್ಗೆ ಮೊದಲು ಹೇಳಿ. ಹೆಚ್ ಡಿ ಕುಮಾರಸ್ವಾಮಿ ಹಿರಿಯರಿದ್ದಾರೆ ನೋಡಿಕೊಂಡು ಮಾತನಾಡಬೇಕು. ಸುಮ್ಮನೆ ಹಿಟ್ ಅಂಡ್ ರನ್ ಬೇಡ ಎಂದು ಕಿಡಿಕಾರಿದರು.
ರಾಜ್ಯದ ಮೇಲೆ ಭ್ರಷ್ಟಾಚಾರದ ಆರೋಪ ಇದೆ. ಅದನ್ನು ತೊಳೆಯುವ ಕೆಲಸ ನಾವು ಮಾಡ್ತಿದ್ದೇವೆ. ಶೇ 40ರಷ್ಟು ಕಮಿಷನ್ ಬಗ್ಗೆ ಕೂಡ ತನಿಖೆ ನಡೆಸುತ್ತಿದ್ದೇವೆ. ಹಿಂದಿನ ಸರ್ಕಾರದ ಮೇಲೆ ನಾವು ಭ್ರಷ್ಟಾಚಾರ ಆರೋಪ ಮಾಡಿದ್ವಿ. ಅದರ ದಾಖಲೆ ಇಟ್ಟುಕೊಂಡು ನಾವು ಮಾತನಾಡಿದ್ದೇವೆ. ಕುಮಾರಸ್ವಾಮಿ ಅವರ ಬಳಿ ದಾಖಲೆ ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.