ಶಿವಮೊಗ್ಗ ;- ರಾಜ್ಯದಲ್ಲಿ ಬಿಜೆಪಿ ಪಕ್ಷದ ಸಂಘಟನೆಯೇ ಇಲ್ಲದಂತಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವ್ಯಂಗ್ಯವಾಡಿದರು.
ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಹಾಗೂ ರಾಜಾಧ್ಯಕ್ಷರ ಆಯ್ಕೆಯಾದ ಬಳಿಕ ಬಿಜೆಪಿಯಲ್ಲಿ ಎರಡು ಪಾರ್ಟಿ ಆಗುತ್ತದೆ”.
ಕರ್ನಾಟಕದಲ್ಲಿ ಎಷ್ಟು ಜಿಲ್ಲೆಯಿದೆ ಅಂತ ಗೊತ್ತಿರದವರನ್ನು ರಾಜ್ಯಾಧ್ಯಕ್ಷನಾಗಿ ಮಾಡಿದ್ದಾರೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ಈಗ ಕೊಡಲ್ಲ ಎನ್ನುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸಂಘಟನೆಯೇ ಇಲ್ಲದಂತಾಗಿದೆ” ಎಂದು ವಾಗ್ದಾಳಿ ನಡೆಸಿದರು. ”ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ನನ್ನ ಪ್ರಕಾರ ಚೀಟಿ ಎತ್ತುವ ಮೂಲಕ ಆಯ್ಕೆ ಮಾಡುತ್ತಾರೆ ಅನಿಸುತ್ತೆ ಎಂದು ಲೇವಡಿ ಮಾಡಿದರು. ಬಿಜೆಪಿ ಬಾಯಿ ಬಂದಂತೆ ಹೇಳಿಕೆಗಳನ್ನು ನೀಡುವುದನ್ನು ನೋಡಿದರೆ ನಮಗೆ ಕನಿಕರ ಬರುತ್ತದೆ” ಎಂದರು.