ಬೆಂಗಳೂರು: ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಪಟ್ಟು ಹಿಡಿದಿದೆ. ಇನ್ನೊಂದೆಡೆ, ಮೊದಲು ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಪ್ರಾರಂಭಿಸೋಣ. ನಿಯಮ ಬಿಟ್ಟು ಚರ್ಚೆಗೆ ಕೊಟ್ಟರೆ ಸಂಪ್ರದಾಯ ಮುರಿದಂತಾಗುತ್ತದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದರು.
ರಾಜ್ಯಪಾಲರ ಭಾಷಣದಲ್ಲೇ ಎಲ್ಲಾ ಅಂಶಗಳು ಇವೆ. ಚರ್ಚೆಗೆ ಅವಕಾಶ ನೀಡದಿದ್ದರೆ ಸರಿಯಾದ ಸಂದೇಶ ರವಾನೆ ಆಗಲ್ಲ ಎಂದು ಸಚಿವ ಪರಮೇಶ್ವರ್ ಹೇಳಿದರು. ಇದಕ್ಕೆ ಎದ್ದುನಿಂತು ಉತ್ತರಿಸಿದ ಬಸವರಾಜ ಬೊಮ್ಮಾಯಿ, ಅಜೆಂಡಾ ಪ್ರಕಾರವೇ ಎಲ್ಲವೂ ನಡೆದಿದೆ ಎಂದರು.
ಇದಕ್ಕೆ ಉತ್ತರಿಸಿದ ಸ್ಪೀಕರ್, ನಾನು ವಿಪಕ್ಷ ಮಿತ್ರ, ಆದರೆ ನಿಯಮ ಮೀರಿ ಹೋಗುವುದು ಬೇಡ. ಕೆಟ್ಟ ಸಂಪ್ರದಾಯಕ್ಕೆ ಅವಕಾಶ ನೀಡಿದಂತಾಗುತ್ತೆ ಎಂದರು.