ಬೆಂಗಳೂರು ;- ಅಥ್ಲೀಟ್ ಬಿಂದುರಾಣಿಯ ಮೇಲೆ ಕೋಚ್ ಪತ್ನಿ ಚಪ್ಪಲಿ ತೋರಿಸಿ ಆಕ್ರೋಶ ಹೊರ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಜ್ಯದ ಹಿರಿಯ ಅಥ್ಲೆಟಿಕ್ಸ್ ಕೋಚ್ ಯತೀಶ್ ಅವರ ಪತ್ನಿ ಶ್ವೇತ ಕ್ರೀಡಾಂಗಣಕ್ಕೆ ಆಗಮಿಸಿ ಬೆಳಗ್ಗೆ ಅಭ್ಯಾಸದ ಸಮಯದಲ್ಲಿ ಬಿಂದುರಾಣಿಗೆ ಅಡ್ಡಗಟ್ಟಿ ನಿಂದಿಸಿದ್ದಾರೆ. ನಿಮ್ಮಂತವರಿಂದ ಕರ್ನಾಟಕದ ಮರ್ಯಾದೆ ಹಾಳಾಗುತ್ತಿದೆ. ನಿನಗೆ ಖೇಲ್ ರತ್ನ ಪ್ರಶಸ್ತಿ ಸಿಕ್ಕಿರುವುದು ವೇಸ್ಟ್ ಮತ್ತು ಅದು ದೊಡ್ದ ದುರಂತ ಅನ್ನುವ ರೀತಿಯಲ್ಲಿ ಮಾತನಾಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಶ್ವೇತ ಬಿಂದುರಾಣಿಗೆ ಚಪ್ಪಲಿ ತೋರಿಸಿ ನೀನು ಕಳ್ಳಿ, ಲಕ್ಷಾಂತರ ಮೌಲ್ಯದ ಕ್ರೀಡಾ ಸಾಮಗ್ರಿಯನ್ನು ಕದ್ದಿದ್ದೀಯ ಎಂದು ಆರೋಪ ಮಾಡಿದ್ದಾರೆ. ಟೆಡ್ ಎಕ್ಸ್ ಶೋನಲ್ಲಿ ಬಿಂದುರಾಣಿ ಭಾಗಹಿಸಿದ್ದರ ಕುರಿತಂತೆ ಶ್ವೇತ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೆಲ್ಲ ಬಿಂದು ರಾಣಿ ಮಾತ್ರ ಯಾವುದೇ ಉತ್ತರ ಕೊಡದೆ ಸುಮ್ಮನೆ ನಿಂತಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.