ಬೆಂಗಳೂರು: ಹಗಲು ದರೋಡೆಗೆ ಕಾಂಗ್ರೆಸ್ ನವರು ಇಳಿದಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಗೆ ತಾಕತ್ತು ಇರೋದ್ರಿಂದ ದಾಖಲೆ ಬಿಡುಗಡೆ ಮಾಡುತ್ತೇನೆ. ನಾನು ದಾಖಲೆ ಕೊಟ್ಟರೆ ಆ ಮಂತ್ರಿಯನ್ನು ವಜಾ ಮಾಡ್ತೀರಾ ಎಂದು ಸವಾಲ್ ಹಾಕಿದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ದ ವರ್ಗಾವಣೆ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ನವರು ಕೂಡ ಪ್ರತಿಕ್ರಿಯೆ ನೀಡುತ್ತಲೇ ಬಂದಿದ್ದಾರೆ.
ಅದರ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನ ಮೂಡಿಸಿದೆ. ಹೌದು ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ವರ್ಗಾವಣೆಗೆ ಹಣವನ್ನ ನಿಗದಿ ಮಾಡಿದ್ದು, ಇಂಧನ ಇಲಾಖೆಯಲ್ಲಿ ಬರೊಬ್ಬರಿ 10 ಕೋಟಿಗೆ ಅಧಿಕಾರಿಗಳ ವರ್ಗಾವಣೆಗೆಯಾಗಿದೆ ಎಂದಿದ್ದಾರೆ.