ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ನವರು ಕೂಡ ಪ್ರತಿಕ್ರಿಯೆ ನೀಡುತ್ತಲೇ ಬಂದಿದ್ದಾರೆ ಹಾಗೆ ಇಂದು ಕೂಡ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ವಿರೋಧ ಪಕ್ಷಗಳು ಅವರ ರಾಜಕಾರಣ ಮಾಡಲಿ. ಅವರು ಯಾವ ಬಾಂಬ್ ಬೇಕಾದರೂ ಹಾಕಲಿ. ಏನಾದರೂ ಮಾಡಲಿ. ಜನರ ಸೇವೆ ಮಾಡುವುದು ನಮ್ಮ ಕರ್ತವ್ಯ. ನಾವು ಅದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.