ಬೆಂಗಳೂರು ;- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ವಿಚಾರವಾಗಿ ಸಚಿವ ಚೆಲುವರಾಯಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಕೆಶಿ ಬ್ಯುಸಿನೆಸ್ ಮಾಡಿಕೊಂಡು ಬಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಏನು ಮಾಡಿಕೊಂಡು ಬಂದಿದ್ದಾರೆ ಹೇಳಿಬಿಡಲಿ ಎಂದರು.
ಕುಮಾರಸ್ವಾಮಿ ಎಲ್ಲಾ ಸಂದರ್ಭದಲ್ಲೂ ಎಲ್ಲರ ಮೇಲೂ ಮಾತನಾಡ್ತಾನೆ ಬಂದಿದ್ದಾರೆ. ಪ್ರಧಾನಿಯಿಂದ ರಾಜ್ಯದ ನಾಯಕರ ಬಗ್ಗೆಯೂ ಮಾತನಾಡ್ತಾ ಬಂದಿದ್ದಾರೆ. 25 ವರ್ಷದಿಂದಲೂ ಮಾತನಾಡ್ತಾ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಧಿವೇಶನ ನಡೆಯುತ್ತಿದೆ. ದಾಖಲೆ ಬಿಡುಗಡೆ ಮಾಡಲಿ. ನಾವೇನಾದ್ರು ಅವರಿಗೆ ಬಿಡುಗಡೆ ಮಾಡಬೇಡಿ ಎಂದು ಹೇಳಿದ್ದೀವಾ..?. ದಾಖಲೆ ಇದ್ರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.