ಬೆಂಗಳೂರು ;- ತಾಜ್ ವೆಸ್ಟ್ಎಂಡ್ ಹೊಟೇಲ್ನಲ್ಲಿ ವಾಸ್ತವ್ಯ ಕುರಿತು ಲಘುವಾಗಿ ಮಾತನಾಡಿದ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುವ ಅವರು, ಕೆಎಸ್ಟಿ’ ತೆರಿಗೆಯನ್ನು ನಾನು ಇಟ್ಟುಕೊಂಡಿಲ್ಲ. ಹಿಂದೆ ನಾನು ಕಾಂಗ್ರೆಸ್ ಪಕ್ಷದ ಜತೆ ಮೈತ್ರಿ ಸರ್ಕಾರ ರಚನೆ ಮಾಡಿದ್ದೆ. ವೆಸ್ಟೆಂಡ್ ಬಾಕಿ ಬಿಲ್ ಕಾಂಗ್ರೆಸ್ಗೆ ಕಳಿಸಿದರಾ?
ತಿಂಗಳಿಗೆ 2-3 ಲಕ್ಷ ರು. ವೆಚ್ಚ ಮಾಡುವ ಯೋಗ್ಯತೆ ಇಲ್ಲವೇ? ತಾಜ್ ವೆಸ್ಟ್ ಎಂಡ್ನಲ್ಲಿ ಈಗಲೂ ರೂಂ ಇದೆ ಎಂದರು. ಬೇಕಿದ್ದರೆ ನನ್ನ ಆಸ್ತಿಯ ಬಗ್ಗೆ ತನಿಖೆ ಮಾಡಲಿ. ರಾಜಕೀಯಕ್ಕೆ ಬರುವ ಮುಂಚೆ ನನ್ನ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ ಎಂಬುದನ್ನು ತನಿಖೆ ಮಾಡಬಹುದು. ನಾನು ಬೇಸಾಯ, ಸಿನಿಮಾ ಮಾಡಿದ್ದೇನೆ. ಕೆಲವರಂತೆ ಟೆಂಟಿನಲ್ಲಿ ನೀಲಿಚಿತ್ರ ತೋರಿಸಿ ದುಡ್ಡು ಮಾಡಿದವನಲ್ಲ. ರೌಡಿಗಳಿಗೆ ಎಣ್ಣೆ ಸಪ್ಲೈ ಮಾಡಿಕೊಂಡು ಬಂದಿದ್ದೀನಾ? ನನ್ನ ಬಗ್ಗೆ ಮಾತನಾಡಲು ಹಿತಿಮಿತಿ ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.