ಚಿಕ್ಕಮಗಳೂರು: ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಬೇಕು. ಇಲ್ಲವಾದರೆ, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಮಂಡಲದ ಮಟ್ಟದಲ್ಲಿ ಹೋರಾಟ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಸಿದ್ದಾರೆ. ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದು ಜನವಿರೋಧಿ ನೀತಿ ಅನುಸರಿಸುತ್ತಿದೆ. ನಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಗ್ಯಾರಂಟಿ ಈಡೇರಿಸುತ್ತೇವೆ ಎಂದಿದ್ದರು.
ಸರ್ಕಾರ ಬಂದು ಎರಡು ತಿಂಗಳು ಕಳೆದರೂ ಸಮರ್ಪಕ ಮಾರ್ಗಸೂಚಿ ರೂಪಿಸಿಲ್ಲ. ಭರವಸೆಗಳನ್ನು ಈಡೇರಿಸುವಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು. ಕೊಟ್ಟಮಾತನಿಂತೆ ಕಾಂಗ್ರೆಸ್ ಸರ್ಕಾರ ತಲಾ 10 ಕೆ.ಜಿ. ಅಕ್ಕಿ ಕೊಡಬೇಕು. ವಿದ್ಯುತ್ ಶುಲ್ಕ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆಯಾಗಿದೆ. ಹೀಗಾಗಿ ಶುಲ್ಕ ಹೆಚ್ಚಳ ಹಿಂಪಡೆಯಬೇಕು. ನಮ್ಮ ಸರ್ಕಾರ ಜಾರಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ರದ್ದು ಮಾಡಲು ಹೊರಟ್ಟಿದೆ. ಪಠ್ಯ ಪುಸ್ತಕದಲ್ಲಿ ಪಾಠ ಕೈ ಬಿಡುತ್ತಿದೆ.