ಚಿತ್ರದುರ್ಗ: ಸವರ್ಣಿಯರಿಂದ ಪರಿಶಿಷ್ಟ ಜಾತಿ ವ್ಯಕ್ತಿಯ ಮೇಲೆ ದೌರ್ಜನ್ಯ ನಡೆದಿದ್ದು ದೌರ್ಜನ್ಯದ ನಂತರ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತಾಳ್ಯ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಸುರೇಶ್ ಹಾಗೂ ಸಹಚರರು ದಲಿತರ ಮನೆಗೆ ನುಗ್ಗಿ ಮನೆ ಮೇಲಿನ ಹಂಚು ಹೊಡೆದು ಪ.ಜಾತಿ ವ್ಯಕ್ತಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿ ತಾಳ್ಯ ಗ್ರಾಮದ ಮಾರುತಿ (28) ಎನ್ನಲಾಗಿದ್ದು ಹಲ್ಲೆ ಬಳಿಕ ಮನೆಯಲ್ಲಿ ರಾತ್ರಿ ನಿಗೂಢವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. ರಾತ್ರಿ ವೇಳೆ ದೌರ್ಜನ್ಯ ಮಾಡಿದ ವ್ಯಕ್ತಿಗಳ ವಿರುದ್ದ ಕೊಲೆ ಕೇಸ್ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಸಿಪಿಐ ರವೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.