ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಧಮ್, ತಾಕತ್ತು ಇದ್ರೆ ಪೆನ್ ಡ್ರೈವ್ನಲ್ಲಿ ಏನಿದೆ ಎಂದು ಬಹಿರಂಗ ಪಡಿಸಿ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಗೆ ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯಿಲಿ ಸವಾಲು ಹಾಕಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸೋತು ಹೆಚ್ಡಿಕೆ ಹತಾಶರಾಗಿದ್ದಾರೆ. ಅವರು ಸಿಎಂ ಆಗಿದ್ದಾಗಿನ ದಾಖಲೆ ಪೆನ್ ಡ್ರೈವ್ನಲ್ಲಿ ಇರಬೇಕು.
ರಾಜ್ಯ ಕಾಂಗ್ರೆಸ್ ಸರ್ಕಾರ ತಪ್ಪು ಮಾಡಲ್ಲ. ತಪ್ಪಿನಲ್ಲಿ ಸಿಲುಕಿಸಲು ಬಿಜೆಪಿ ಜೆಡಿಎಸ್ ಯತ್ನಿಸುತ್ತಿದೆ. ಅವರ ಕನಸ್ಸು ಹಿಡೇರಲ್ಲ ಎಂದರು.
ಬುಧವಾರ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಪೆನ್ ಡ್ರೈವ್ ಬಾಂಬ್ ಹಾಕಿದ್ದಾರೆ. ವರ್ಗಾವಣೆ ದಂಧೆ ಬಗ್ಗೆ ಸದನದಲ್ಲಿ ಗುಡುಗುತ್ತಿದ್ದ ಕುಮಾರಸ್ವಾಮಿ, ಸಾಕ್ಷ್ಯ ಸಮೇತ ವಿಧಾನಸೌಧಕ್ಕೆ ಎಂಟ್ರಿ ಕೊಟ್ರು ಸಚಿವರೊಬ್ಬರು ವರ್ಗಾವಣೆಗೆ ಹಣ ಡಿಮ್ಯಾಂಡ್ ಮಾಡಿರೋ ಆಡಿಯೋ ಅದಾಗಿದ್ದು ಎಂದು ತನ್ನ ಜೇಬಿನಿಂದ ಪೆನ್ ಡ್ರೈವ್ ತೆಗೆದು ಮಾಧ್ಯಮಗಳ ಎದುರು ತೋರಿಸಿದ್ದಾರೆ.