ಬೆಂಗಳೂರು: ವಿಧಾನಸಭೆಯಲ್ಲಿ ಕೆ.ಜೆ.ಜಾರ್ಜ್, ಕುಮಾರಸ್ವಾಮಿ ನಡುವೆ ವಾಗ್ವಾದ ನಡೆದಿದೆ. ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂಬ ಆರೋಪಕ್ಕೆ ಕೆ.ಜೆ.ಜಾರ್ಜ್ ತಿರುಗೇಟು ಕೊಟ್ಟಿದ್ದಾರೆ.
ನನ್ನ ಬಳಿ ಪೆನ್ಡ್ರೈವ್ ಇದೆ, ಅದರಲ್ಲಿ ಸಾಕ್ಷ್ಯವಿದೆ ಎಂದು ಹೇಳುತ್ತೀರಿ. ನಿಮ್ಮ ಬಳಿ ಯಾವ ಸಾಕ್ಷ್ಯವಿದೆ, ಅದನ್ನು ಸ್ಪೀಕರ್ಗೆ ನೀಡಿ ಎಂದು ವಿಧಾನಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಕೆ.ಜೆ.ಜಾರ್ಜ್ ಮನವಿ ಮಾಡಿದರು.
ಅದಕ್ಕೆ ಪೆನ್ಡ್ರೈವ್ನಲ್ಲಿರುವ ಸಾಕ್ಷ್ಯ ವೀಕ್ಷಣೆಗೆ ಸದನದಲ್ಲಿ ವ್ಯವಸ್ಥೆ ಮಾಡಿ. ಸ್ಪೀಕರ್ ಒಪ್ಪಿಗೆ ಕೊಟ್ಟರೆ ಸದನದಲ್ಲೇ ಪೆನ್ ಡ್ರೈವ್ ಪ್ರದರ್ಶನ ಮಾಡುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.