ಬೆಂಗಳೂರು: ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂಗಾರು ಅಬ್ಬರ ಜುಲೈ 8 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ, ಇದರ ಪರಿಣಾಮವಾಗಿ ಹೆಚ್ಚಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತದೆ. ಜು. 8ರ ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.