ಬೆಂಗಳೂರು: ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಉಚ್ಛಾಟನೆಯನ್ನು ಕಾಂಗ್ರೆಸ್ ಹಿಂಪಡೆದಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದಕ್ಕೆ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಯನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿತ್ತು.
ಕಾಂಗ್ರೆಸ್ ಶಿಸ್ತು ಸಮಿತಿಯಿಂದ ಉಚ್ಛಾಟನೆ ಮಾಡಲಾಗಿತ್ತು. ಆದ್ರೆ ಈಗ ಕಾಂಗ್ರೆಸ್ ಶಿಸ್ತು ಸಮಿತಿ ಮತ್ತೆ ಖಾದ್ರಿ ಉಚ್ಚಾಟನೆ ಹಿಂಪಡೆದಿದೆ.
ಸಿಎಂ ವಿರುದ್ಧ ನಾಲ್ಕು ಬಾರಿ ಸೋತಿದ್ದೇನೆ ಆದ್ದರಿಂದ ಹೈಕಮಾಂಡ್ ಸ್ಪರ್ಧೆ ಬೇಡ ಅಂತ ಹೇಳಿದೆ. ಹಾಗಾಗಿ ವಿನಯ್ ಕುಲಕರ್ಣಿಗೆ ಕ್ಷೇತ್ರ ಬಿಟ್ಟುಕೊಡುತ್ತಿದ್ದೇನೆ ಎಂದು ಇತ್ತೀಚೆಗೆ ಅಜ್ಜಂಪೀರ್ ಖಾದ್ರಿ ಹೇಳಿದ್ದರು