ಬೆಂಗಳೂರು: ವಿಧಾನಮಂಡಲದ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ಬರುವ ವಿಷಯದ ಬಗ್ಗೆ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಶ್ರೀ. ಟಿ. ಎ. ಶರವಣ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ.
15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಾದ ಸುಮಾರು 5000 ಕೋಟಿಗೂ ಹೆಚ್ಚುವರಿ ವಿಶೇಷ ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಲು ನಿರಾಕರಿಸುತ್ತಿರುವ ಬಗ್ಗೆ ಪರಿಷತ್ ನಲ್ಲಿ ಟಿ.ಎ.ಶರವಣ ಅವರು ಎಲ್ಲರ ಮುಂದೆ ಪ್ರಸ್ತಾಪ ಮಾಡಿದರು.
ಇದೇ ವೇಳೆ ಇದು ಸತ್ಯ ಸಮಘತಿ ಇರಬಹುದು ಆದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿ ಮಾಡಲು ಅನುದಾನವನ್ನು ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎನ್ನುವುದರ ಬಗ್ಗೆ ಸಿಎಂ ಸಿದ್ದರಾಮಯ್ಯನವರು ನಮಗೆ ಉತ್ತರಿಸಬೇಕಾಗುತ್ತದೆ ಹಾಗೆ ಇದರ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಾ ಅದರ ಬಗ್ಗೆನೂ ನಮಗೆ ನೀವು ತಿಳಿಸಬೇಕು ಎಂದು ಹೇಳಿದರು.