ಬೆಂಗಳೂರು ;- ಚಾಲಕನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿಗೆ ಅಧಿಕಾರ ಇಲ್ಲ. ಅದಕ್ಕಾಗಿ ಏನೇನೋ ಮಾತನಾಡ್ತಾ ಇದ್ದಾರೆ. ಚಾಲಕನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಆತನನ್ನು ಬೇರೆ ಯಾವುದೋ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಿರಲಿಲ್ಲ. ನಾಗಮಂಗಲದಿಂದ ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಕೇವಲ 30 ಕಿ.ಮೀ. ದೂರ ವರ್ಗಾವಣೆ ಮಾಡಿರೋದು. ಆತನ ಜೀವಕ್ಕೆ ಏನಾದ್ರೂ ಹೆಚ್ಚು ಕಮ್ಮಿ ಆದ್ರೆ ಕುಮಾರಸ್ವಾಮಿ ನೇರ ಹೊಣೆ” ಎಂದು ಕಿಡಿ ಕಾರಿದರು.
ಇನ್ನೂ ವರ್ಗಾವಣೆ ದಂಧೆ ವಿಚಾರವಾಗಿ ಮಾತನಾಡಿದ ಅವರು, ”ಕುಮಾರಸ್ವಾಮಿಯವರು ಹೊಸದಾಗಿ ಪ್ರಸ್ತಾಪ ಮಾಡ್ತಿಲ್ಲ. ವರ್ಗಾವಣೆ ವಿಚಾರದಲ್ಲಿ ನಾನು ಯಾವುದೇ ಪತ್ರ ಕೊಟ್ಟಿಲ್ಲ. ಸದನದಲ್ಲಿ ಕುಮಾರಸ್ವಾಮಿಗೆ ನಮ್ಮ ಮಂತ್ರಿಗಳನ್ನು, ಮುಖ್ಯಮಂತ್ರಿಗಳನ್ನು ನೋಡಲು ಆಗ್ತಿಲ್ಲ. ದೇವರು ಕುಮಾರಸ್ವಾಮಿಯವರಿಗೆ ಸಮಾಧಾನ ನೀಡಲಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಎಷ್ಟು ವರ್ಗಾವಣೆ ಮಾಡುದ್ರು ಕೇಳಿ” ಎಂದು ಟೀಕಿಸಿದರು.