ಬೆಂಗಳೂರು ;– ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ರೈತರು ಪಂಪ್ ಸೆಟ್ಗಳಿಗೆ ಸೌರ ವಿದ್ಯುತ್ ಸಂಪರ್ಕ ಅಳವಡಿಸಿಕೊಳ್ಳಲು ಸುಮಾರು 4.5 ಲಕ್ಷ ರೂ. ಖರ್ಚಾಗಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸುಮಾರು 3.5 ಲಕ್ಷ ರೂಪಾಯಿ ಸಹಾಯಧನದ ರೂಪದಲ್ಲಿ ದೊರೆಯಲಿದೆ. ಇನ್ನೊಂದು ಲಕ್ಷ ರೂ. ವನ್ನು ರೈತರು ಭರಿಸುವುದು ಕಷ್ಟವಾಗಲಿದೆ ಎಂಬುದನ್ನು ಮನಗಂಡಿರುವ ಸರ್ಕಾರ, ಯಾವುದಾದರೂ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಿದೆ ಎಂದರು.
ರೈತರು ರಾಜ್ಯದ ಜೀವನಾಡಿಯಾಗಿದ್ದು, ಅವರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ರೈತರ ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್ ಪೂರೈಕೆಗೆ ಏನೆಲ್ಲಾ ಮಾಡಬಹುದು ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು. ಅಕ್ರಮ – ಸಕ್ರಮ ಯೋಜನೆ ಒಂದು ಬಾರಿಗೆ ಮಾತ್ರ ಸೂಕ್ತವಾಗಿದ್ದು, ಎಲ್ಲಾ ಕಾಲಕ್ಕೂ ಈ ಯೋಜನೆ ಅನ್ವಯ ಮಾಡುವುದು ಕಷ್ಟವಾಗುತ್ತದೆ ಎಂದರು