ಬೆಂಗಳೂರು: ಇಂದು 12 ಗಂಟೆಗೆ ಸಿಎಂ ಸಿದ್ದರಾಮಯ್ಯ 14ನೇ ಬಜೆಟ್ ಮಂಡಸಲಿದ್ದು, ಈ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತೀ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ದೂರದೃಷ್ಟಿ ಆಲೋಚನೆಗಳನ್ನು ಕ್ರೂಢೀಕರಿಸಿ, ಮಹತ್ವದ ಬಜೆಟ್ ಮಂಡಿಸಲು ಈಗಾಗಲೇ ಎಲ್ಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಜೆಟ್ ಮಂಡನೆಗೆ ಅಂತಿಮ ರೂಪ ಕೊಟ್ಟಿದ್ದಾರೆ. ಮುಖ್ಯವಾಗಿ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಹೆಚ್ಚಿಸುವ ಸಾಧ್ಯತೆಯಿದೆ.
ಗ್ಯಾರಂಟಿ ಜಾರಿ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಜೆಟ್ ಇದಾಗಿದೆ. ಹಿಂದಿನ ಸರ್ಕಾರ 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿತ್ತು. ಈ ಬಾರಿ ಸಿದ್ದರಾಮಯ್ಯ ಮಂಡಿಸುವ ಬಜೆಟ್ ಗಾತ್ರ ಮತ್ತಷ್ಟು ಹೆಚ್ಚಾಗಲಿದೆ. ಈ ಮೂಲಕ ಗ್ಯಾರಂಟಿ ಜಾರಿ ಜೊತೆ ಇನ್ನೇಷ್ಟು ಭಾಗ್ಯ ಸಿಗಲಿದೆ ಕಾದು ನೋಡಬೇಕು.
ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿ ನಿವಾಸದಿಂದ ಸಿಎಂ ಸಿದ್ದರಾಮಯ್ಯ ವಿಧಾನಸೌಧಕ್ಕೆ ಹೊಸ ಮೈಸೂರು ಪಂಚೆ, ಶಲ್ಯ ಧರಿಸಿ ತೆರಳಿದ್ದಾರೆ.