ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿ ಮಾಡಿದ್ದ ಎಪಿಎಂಸಿ ಕಾಯ್ದೆ ವಾಪಸ್ಗೆ ನಿರ್ಧಾರ ಮಾಡಲಾಗಿದೆ. ರೈತರ ಹಿತದೃಷ್ಟಿಯಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲಾಗಿದ್ದು, ‘ಕಾಯದ ನಿಧಿ’ ಯೋಜನೆಯ ಅನುದಾನವನ್ನು 10,000 ರೂಪಾಯಿಯಿಂದ 25 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
1696 ಕೋಟಿ ವೆಚ್ಚದಲ್ಲಿ ರಾಯಚೂರಿನಲ್ಲಿ ಹೈಬ್ರಿಡ್ ಆನ್ಯೂಟಿ ಮಾದರಿ ರಸ್ತೆ ನಿರ್ಮಾಣಕಲ್ಯಾಣ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಅನುದಾನ ನೀಡಲಾಗಿದ್ದು, ರಾಯಚೂರಿನ ಕಲ್ಮಲಾ ಜಂಕ್ಷನ್ನಿಂದ ಸಿಂಧನೂರಿನವರೆಗೆ ಹೈಬ್ರಿಡ್ ಆನ್ಯೂಟಿ ಮಾದರಿಯ ರಸ್ತೆ ನಿರ್ಮಾಣಕ್ಕೆ 1696 ಕೋಟಿ ವೆಚ್ಚದಲ್ಲಿ 78 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಜೊತೆಗೆ 4,083 ಕೋಟಿ ವೆಚ್ಚದಲ್ಲಿ ಅಂತರ್ ಜಿಲ್ಲಾ ಸಂಪರ್ಕ ಕಲ್ಪಿಸಲು 2400 ಕಿ.ಮೀ ಜಿಲ್ಲಾ ರಸ್ತೆಗಳ ಅಭಿವೃದ್ಧಿಗಾಗಿ ನಿರ್ಧರಿಸಲಾಗಿದೆ.
ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆಗೆ ಅನುಮೋದನೆ ನೀಡಲಾಗಿದೆ. ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಅಸ್ತು ಎನ್ನಲಾಗಿದ್ದು, ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.