ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ನಂದಿನಿ ಹಾಲಿನ ದರ 5 ರೂ. ಹೆಚ್ಚಳವಾಗಲಿದೆ.
ಲೀಟರ್ ನಂದಿನಿ ಹಾಲಿನ ದರವನ್ನು 5 ರೂ.ಏರಿಕೆ ಮಾಡಬೇಕು ಎಂದು ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ನಿನ್ನೆ ಸಭೆ ನಡೆಸಿರುವ ಹಾಲು ಒಕ್ಕೂಟಗಳು, ನಂದಿನಿ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿದ್ದು, ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.
ಜುಲೈ 11 ರಂದು ನಂದಿನಿ ಹಾಲಿನ ದರವನ್ನು ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಸಲ್ಲಿಸಿರುವ ಕರ್ನಾಟಕ ಹಾಲು ಮಹಾಮಂಡಳದ ಆಡಳಿತ ಮಂಡಳಿ ಈ ಕುರಿತು ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಿದೆ ಎನ್ನಲಾಗಿದೆ.
ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.