ಬೆಂಗಳೂರು: ಕೆಎಂಎಫ್ನ ನಂದಿನಿ ಬ್ರಾಂಡ್ ಕನ್ನಡಿಗರೊಂದಿಗೆ ಭಾವನಾತ್ಮಕ ಸಂಬಂಧವನ್ನು ಹೊಂದಿದ್ದು, ಇದನ್ನು ರಕ್ಷಿಸಲು ಮತ್ತು ಬೆಳೆಸಲು ಬದ್ಧವಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
14ನೇ ಬಜೆಟ್ ಮಂಡನೆ ಮಾಡಿದ ಅವರು, ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ರೈತರ ಉತ್ಪನ್ನಗಳ ಮಾರುಕಟ್ಟೆಯನ್ನು ಸಕ್ರಿಯಗೊಳಿಸಲು ‘ನಂದಿನಿ’ ಮಾದರಿಯಲ್ಲಿ ರೈತರ ಉತ್ಪನ್ನಗಳ ಬ್ರ್ಯಾಂಡಿಂಗ್ ಅನ್ನು ಪ್ರೋತ್ಸಾಹಿಸಲು 10 ಕೋಟಿ ನೀಡಲಾಗುವುದು ಎಂದು ಘೋಷಿಸಿದರು.
ನಂದಿನಿ ಬ್ರಾಂಡ್ ಕನ್ನಡಿಗರೊಂದಿಗೆ ಭಾವನಾತ್ಮಕ ಸಂಬಂಧವನ್ನು ಹೊಂದಿದೆ ಮತ್ತು ಈ ಬಾಂಧವ್ಯವನ್ನು ರಕ್ಷಿಸಲು ಮತ್ತು ಬೆಳೆಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದರು.
ರಾಜ್ಯದಲ್ಲಿ 100 ಹೊಸ ಪಶು ಚಿಕಿತ್ಸಾಲಯಗಳನ್ನು ಸ್ಥಾಪಿಸುವುದಾಗಿಯೂ ಬಜೆಟ್ನಲ್ಲಿ ಘೋಷಿಸಲಾಗಿದೆ. ಗೋವುಗಳನ್ನು ದತ್ತು ಪಡೆಯಲು ಪ್ರೋತ್ಸಾಹಿಸಲು ಪುಣ್ಯಕೋಟಿ ದತ್ತು ಯೋಜನೆಯನ್ನೂ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಮೆಗಾ ಡೈರಿಗಳನ್ನು ಸ್ಥಾಪಿಸುವ ಯೋಜನೆಯನ್ನು ಸಿದ್ದರಾಮಯ್ಯ ಘೋಷಿಸಿದರು.
ಕ್ಷೀರ ಸಮೃದ್ಧಿ ಶಾಕರ ಬ್ಯಾಂಕ್ಗೆ ಷೇರು ಬಂಡವಾಳವಾಗಿ 100 ಕೋಟಿ ರೂಪಾಯಿ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದರು. ಈ ಬ್ಯಾಂಕ್ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯಗಳನ್ನು ನೀಡುತ್ತದೆ. ಇದೇ ವೇಳೆ, 50 ಕೋಟಿ ರೂಪಾಯಿ ವೆಚ್ಚದಲ್ಲಿ ಗೋಶಾಲೆಗಳ ಸಂಖ್ಯೆ ಹೆಚ್ಚಿಸಲು ಬಜೆಟ್ನಲ್ಲಿ ನಿರ್ಧರಿಸಲಾಗಿದೆ.