ಚಾಮರಾಜನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ಕಾನೂನು ಸೇವಾ ಪ್ರಾಧಿಕಾರದ ಮಕ್ಕಳ ಸ್ನೇಹಿ ನ್ಯಾಯಾಧೀಶರಾದ ಎ.ಸಿ.ನಿಶಾರಾಣಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಚಾಮರಾಜನಗರ ತಾಲೂಕಿನ ರಂಗಸ್ವಾಮಿ(21) ಶಿಕ್ಷೆಗೊಳಗಾದ ಅಪರಾಧಿ. 20 ವರ್ಷ ಕಠಿಣ ಶಿಕ್ಷೆ ಜೊತೆಗೆ 40 ಸಾವಿರ ರೂ. ದಂಡ ವಿಧಿಸಲಾಗಿದೆ. ಸಂತ್ರಸ್ತ ಬಾಲಕಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದಾರೆ.