ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿದೆ. ಬೇಲೂರು ತಾಲೂಕಿನ, ಲಕ್ಕುಂದ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ.
ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮದೆಲ್ಲಾಲ್ಲಾ ಓಡಾಡಿ ಲಕ್ಷ್ಮಮ್ಮ ಅವರ ಮನೆಯ ಕಾಂಪೌಂಡ್ ಧ್ವಂಸಗೊಳಿಸಿರುವ ಹೆಣ್ಣಾನೆ ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಬೇಲೂರು ತಾಲೂಕಿನ ಗ್ರಾಮದ ಸುತ್ತಮುತ್ತ ಕಾಡಾನೆಗಳು ಬೀಡುಬಿಟ್ಟಿವೆ. ಕಾಡಾನೆಗಳನ್ನು ಕಂಡು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕಾಡಾನೆಗಳ ಹಿಂಡಿನ ದಾಳಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಲಕ್ಷ್ಮಮ್ಮ ಒತ್ತಾಯ ಮಾಡಿದ್ದಾರೆ.