ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಜು.07) 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಇಂದು ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಇಂದಿನ ಬಹುತೇಕ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.
14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಐತಿಹಾಸಿಕ ದಾಖಲೆ ಬರೆದಿದ್ದಾರೆ. ಮುಖ್ಯಮಂತ್ರಿಯಾಗಿ 7ನೇ ಬಾರಿ ಬಜೆಟ್ ಮಂಡಿಸಿದ್ದಾರೆ. ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಇದಾಗಿದ್ದು, ಈ ಬಾರಿಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಹಣ ಹೊಂದಿಸುವ ಜೊತೆಯಲ್ಲೇ ಅಭಿವೃದ್ಧಿ ಕಾರ್ಯಗಳಿಗೂ ಭರಪೂರ ಅನುದಾನ ನೀಡುವ ಕೆಲಸ ಮಾಡಿದ್ದಾರೆ. ತೆರಿಗೆ ಸೋರಿಕೆ ತಡೆಯುವ ಜೊತೆಯಲ್ಲೇ ಮದ್ಯದ ತೆರಿಗೆ ಏರಿಕೆ ಮಾಡುವ ಮೂಲಕ ತೆರಿಗೆ ಸಂಗ್ರಹ ಗುರಿಯನ್ನೂ ಹೆಚ್ಚಿಸಲಾಗಿದೆ