ಬೆಂಗಳೂರು: ಸರ್ಕಾರದ ವಿರುದ್ಧ ಮಾಜಿ ಸಿದ್ದರಾಮಯ್ಯ ಹೆಚ್ಡಿ ಕುಮಾರಸ್ವಾಮಿಯವರು ಪೆನ್ಡ್ರೈವ್ ಅರೋಪ ವಿಚಾರವಾಗಿ ಹೆಚ್ಡಿ ಕುಮಾರಸ್ವಾಮಿಯವರು 2 ಬಾರಿ ಮುಖ್ಯಮಂತ್ರಿಗಳಾಗಿದ್ದರು.
ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಪೆನ್ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಸರಿಯಲ್ಲ ಎಂದು ಮೈಸೂರಿನಲ್ಲಿ ಹೆಚ್.ವಿಶ್ವನಾಥ್ ಹೇಳಿದರು.
ಸಚಿವ ಸಂಪುಟದ ಬಗ್ಗೆ ಎಲ್ಲರೂ ಮಾತನಾಡುವುದು ಸರಿಯಲ್ಲ. ಮುಖ್ಯ ಮಂತ್ರಿಯಾಗಲಿ ಬೇರೆ ಯಾರೇ ಆಗಲಿ ಅದರ ಬಗ್ಗೆ ದಿನವಿಡೀ ಮಾತನಾಡುವುದು ಸರಿಯಲ್ಲ. ಹೈ ಕಮಾಂಡ್ ಯಾವಾಗ ಗ್ರೀನ್ ಸಿಗ್ನಲ್ ಕೊಡುತ್ತೋ, ಅವಾಗ ಸಂಪುಟ ವಿಸ್ತರಣೆ ಆಗುತ್ತೆ. ಪ್ರತಿ ದಿನ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಬದಲು ಅಭಿವೃದ್ಧಿಯ ಕುರಿತು ಮಾತನಾಡುವುದು ಉತ್ತಮ. ಹಿರಿಯನಾಗಿ ನನ್ನ ಅನುಭವದ ಆಧಾರದ ಮೇಲೆ ಈ ಮಾತು ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.