ಬೆಂಗಳೂರು: ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡಲಾಗುತ್ತದೆ. ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ಇಪಿ (NEP) ರದ್ದುಗೊಳಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನಿಡಿದ್ದಾರೆ. ರಾಜ್ಯ ಶಿಕ್ಷಣ ನೀತಿಯನ್ನ ಜಾರಿಗೆ ತರಲು 8 ತಿಂಗಳುಗಳ ಕಾಲಾವಕಾಶ ಇದೆ. ಸಣ್ಣ ತಂಡ ಮಾಡಿ ಪಠ್ಯ ಬದಲಾವಣೆ ಮಾಡಿದ ರೀತಿಯಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬಿಜೆಪಿಗೆ ಕುಟುಕಿದ್ದಾರೆ.
ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ದೊಡ್ಡ ತಂಡವನ್ನು ರಚಿಸಲಾಗಿದೆ. ಭಾಷೆಗಳಿಗೆ ಪ್ರಯೋಗಿಕ ತರಗತಿಗಳನ್ನು ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ. ಈ ನೀತಿಯಲ್ಲಿ ರಾಜ್ಯ ಸಿಲೆಬಸ್, ನ್ಯಾಷನಲ್ ಸಿಲೆಬಸ್ ಎನ್ನುವ ವ್ಯತ್ಯಾಸ ಇರುವುದಿಲ್ಲ ಎಂದಿದ್ದಾರೆ.