ಬೆಂಗಳೂರು ;– ಜುಲೈ 17ರ ವರೆಗೆ ಯಾವುದೇ ಸಭೆ ನಡೆಸದಂತೆ ಒಕ್ಕಲಿಗರ ಸಂಘಕ್ಕೆ ಬೆಂಗಳೂರಿನ ಹೈಕೋರ್ಟ್ ತಾಕೀತು ಮಾಡಿದೆ.
ನ್ಯಾಯಮೂರ್ತಿ ಹೆಚ್. ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಪ್ರತಿವಾದಿಗಳಲ್ಲಿ ಒಬ್ಬರಾಗಿರುವ ಕೆಂಚಪ್ಪಗೌಡರ ಪರ ವಕೀಲರು, ಸಂಘದ ಸಭೆ ನಡೆಸುವುದಕ್ಕೆ ಸಂಬಂಧಿಸಿದಂತೆ ಎರಡೂ ಬಣಗಳು ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ನಿರ್ದೇಶನ ನೀಡಬೇಕು. ಇಲ್ಲವಾದಲ್ಲಿ ರೆಸಾರ್ಟ್ ರಾಜಕಾರಣಕ್ಕೆ ದಾರಿ ಮಾಡಿಕೊಡಲಿದೆ ಎಂದು ನ್ಯಾಯಪೀಠಕ್ಕೆ ಕೋರಿದರು.
ಪರಿಗಣಿಸಿ ಪೀಠ, ಬಾಲಕೃಷ್ಣ ನೇತೃತ್ವದ ಗುಂಪು 17ರ ವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು. ಹೈಕೋರ್ಟ್ ಮೆಟ್ಟಿಲೇರಿದ ಸದಸ್ಯರನ್ನು ಹೊರತು ಪಡಿಸಿ ಉಳಿದ ಸದಸ್ಯರಿಗೆ ಪೂರ್ವ ನೋಟಿಸ್ ನೀಡಿ ಅವಿಶ್ವಾಸ ನಿರ್ಣಯ ಮಂಡಿಸುವಂತೆ ನಿರ್ದೆಶನ ನೀಡಿ ವಿಚಾರಣೆಯನ್ನು ಮುಂದೂಡಿತು.