ಬೆಂಗಳೂರು ;- ಶೀತ, ಕೆಮ್ಮು, ಗಂಟಲು ನೋವಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ವಿಶ್ರಾಂತಿಗೆ ಜಾರಿದ್ದಾರೆ.
ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿಗಳು ಯಾರನ್ನೂ ಭೇಟಿ ಮಾಡುತ್ತಿಲ್ಲ. ಅವರ ಭೇಟಿಗೆ ಬಂದ ಅಧಿಕಾರಿಗಳು ಮತ್ತು ರಾಜಕಾರಣಿಗಳು ವಾಪಸ್ ಆಗಿದ್ದಾರೆ.
ಹವಾಮಾನದಿಂದಾಗಿ ಅವರಿಗೆ ನಿನ್ನೆಯೇ ಶೀತ ಕಾಣಿಸಿಕೊಂಡಿದ್ದು, ಅದನ್ನು ಲೆಕ್ಕಿಸದೇ ಸಿಎಂ ಬಜೆಟ್ಅನ್ನು 2.50 ನಿಮಷಗಳ ಕಾಲ ಓದಿ ಮುಗಿಸಿದ್ದರು. ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಜೆಟ್ಗೆ ಸಂಬಂಧಿಸಿದಂತೆ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದ್ದ ಸಿದ್ದರಾಮಯ್ಯ ಅವರು ಬಳಿಕ ತಮ್ಮ ನಿವಾಸಕ್ಕೆ ತೆರಳಿದ್ದರು. ರಾತ್ರಿಯಿಂದ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.