ಬೆಂಗಳೂರು: ಹಿರೇಕೋಡಿಯ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
DK Visit: ಇಂದಿರಾ ಕ್ಯಾಂಟೀನ್ಗೆ ಸರ್ಪ್ರೈಸ್ ವಿಸಿಟ್ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್
ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
HDK Pendrive Bomb: ಹೆಚ್ಡಿಕೆ ಪೆನ್ಡ್ರೈವ್ ಬ್ರಹ್ಮಾಸ್ತ್ರ: ಸೋಮವಾರ ವಿಧಾನಸಭೆಯಲ್ಲಿ ಸ್ಫೋಟವಾಗಲಿದೆಯಾ?
ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ 400 ಅಡಿ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.