ಬೆಂಗಳೂರು : ಕರ್ನಾಟಕದ 80 ಯಾತ್ರಾರ್ಥಿಗಳು ಅಮರನಾಥ ಯಾತ್ರೆಗೆ(Amarnath Yatra) ತೆರಳುವ ಮಾರ್ಗ ಮಧ್ಯೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್(DK Sivakumar), ಹವಾಮಾನ ವೈಪರೀತ್ಯದಿಂದ ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23ಮಂದಿ ಸೇರಿದಂತೆ ಒಟ್ಟು 80 ಕನ್ನಡಿಗರು ಸಂಕಷ್ಟದಲ್ಲಿ ಸಿಲುಕಿರುವ ವಿಷಯವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಸಂಕಷ್ಟದಲ್ಲಿ ಸಿಲುಕಿರುವ ಎಲ್ಲರನ್ನೂ ಸುರಕ್ಷಿತವಾಗಿ ವಾಪಸ್ ಕರೆತರುವ ವ್ಯವಸ್ಥೆ ಮಾಡಲಾಗಿದ್ದು,
ಈ ಸಂಬಂಧ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ. ಗದಗ ಜಿಲ್ಲೆಯ 23 ಮಂದಿ ಸೇರಿದಂತೆ ಒಟ್ಟು 80 ಮಂದಿ ಜುಲೈ 4ರಂದು ಅಮರನಾಥ ದರ್ಶನಕ್ಕೆ ತೆರಳಿದ್ದರು. ದರ್ಶನ ಪಡೆದು ಶುಕ್ರವಾರ ವಾಪಸ್ ತೆರಳುವ ಸಂದರ್ಭದಲ್ಲಿ ಭಾರಿ ಮಳೆಯಿಂದಾಗಿ ಮಾರ್ಗಮಧ್ಯೆ ಗುಡ್ಡ ಕುಸಿತವಾಗಿದೆ. ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ಪಡೆದು ಯಾತ್ರೆಗಳು ಸುರಕ್ಷಿತವಾಗಿದ್ದಾರೆ.