ಕೊಪ್ಪಳ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಪ್ಪಳ ನಗರದಲ್ಲಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ(Silent protest) ನಡೆಯುತ್ತಿದೆ.
ಕೊಪ್ಪಳದ ಅಶೋಕ ವೃತ್ತದಲ್ಲಿ(Ashoka circle of Koppal) ಸಮುದಾಯದ ಜನರು, ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಪ್ಪು ಪಟ್ಟಿ ಧರಿಸಿ ಡಿಸಿ ಕಚೇರಿವರೆಗೆ ತೆರಳಿ ಮನವಿ ಸಲ್ಲಿಸಿದ್ದಾರೆ.